ETV Bharat / state

ಚಾಮರಾಜನಗರ: 60 ಜನರಿಗೆ ಕೊರೊನಾ, ಇಬ್ಬರು ಸೋಂಕಿತರು ಸಾವು

ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 19 ಕ್ಕೇರಿದೆ. ಇಂದು 10 ವರ್ಷದೊಳಗಿನ ನಾಲ್ವರು ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ. ಬಿಡುಗಡೆಯಾದವರ ಪಟ್ಟಿಯಲ್ಲಿ 10ಕ್ಕೂ ಹೆಚ್ಚು ಮಕ್ಕಳಿದ್ದು 15 ದಿನದ ಶಿಶುವೊಂದು ಕೊರೊನಾ ಜಯಿಸಿದೆ.

author img

By

Published : Aug 8, 2020, 9:24 PM IST

Two people killed by Corona positive in Chamarajanagar
ಚಾಮರಾಜನಗರ ಜಿಲ್ಲೆಯಲ್ಲಿಂದು 60 ಜನರಿಗೆ ಕೊರೊನಾ, ಇಬ್ಬರು ಸೋಂಕಿತರು ಸಾವು

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 60 ಜನರಿಗೆ ಕೊರೊನಾ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 1,103 ಆಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಇಂದು ಕೂಡ 68 ಮಂದಿ ಸೋಂಕಿತರು ಗುಣಮುಖರಾಗಿ ಮನೆಗೆ ಮರಳುವ ಮೂಲಕ ಸಕ್ರಿಯ ಪ್ರಕರಣ ಸಂಖ್ಯೆ 383ಕ್ಕೆ ಇಳಿದಿದೆ. ಇಲ್ಲಿಯವರೆಗೆ ಆರೋಗ್ಯ ಇಲಾಖೆ 26 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದೆ.

ಮೃತಪಟ್ಟವರ ವಿವರ:

ಕೊಳ್ಳೇಗಾಲ ತಾಲೂಕಿನ ಪುಷ್ಪಪುರ ಗ್ರಾಮದ 40 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಕಳೆದ ಆಗಸ್ಟ್‌ 4ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.

ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ 60 ವರ್ಷದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಇವರಿಗೂ ಕೋವಿಡ್ ಇರುವುದು ಬಳಿಕ ಗೊತ್ತಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 19 ಕ್ಕೇರಿದೆ. ಇಂದು 10 ವರ್ಷದೊಳಗಿನ ನಾಲ್ವರು ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ. ಬಿಡುಗಡೆಯಾದವರ ಪಟ್ಟಿಯಲ್ಲಿ 10ಕ್ಕೂ ಹೆಚ್ಚು ಮಕ್ಕಳಿದ್ದು 15 ದಿನದ ಶಿಶುವೊಂದು ಇಂದು ಕೊರೊನಾ ಜಯಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.