ಚಾಮರಾಜನಗರ : ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿರುವ ಘಟನೆ ಗುಂಡ್ಲುಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಹೊಸೂರು ಗ್ರಾಮದ ಖಾಲಿ ನಿವೇಶನದಲ್ಲಿ ಸುರೇಶ್ ನಾಯಕ(35) ಎಂಬುವವರ ಶವ ಪತ್ತೆಯಾಗಿದ್ದು, ತಲೆಗೆ ತೀವ್ರವಾದ ಪೆಟ್ಟು ಬಿದ್ದಿದೆ. ರಾಯಲ್ ಎನ್ ಫೀಲ್ಡ್ ಬೈಕ್ ಕೂಡ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಇನ್ನು ವಡ್ಡರಹೊಸಳ್ಳಿಯಲ್ಲಿ ಶಿವನಂಜಶೆಟ್ಟಿ(39) ಎಂಬವರ ಶವ ಪತ್ತೆಯಾಗಿದ್ದು ಮಚ್ಚಿನಿಂದ ಹಲ್ಲೆ ಮಾಡಿರುವ ಗುರುತುಗಳು ಪತ್ತೆಯಾಗಿದೆ. ಈ ಪ್ರಕರಣದಲ್ಲೂ ಕೂಡ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್ ಪಿ ಜಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.