ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಜಿಂಕೆಯೊಂದು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಎಡವರಹಳ್ಳಿ ಆನೆ ಕಾರಿಡಾರ್ ರಸ್ತೆಯಲ್ಲಿ ನಡೆದಿದೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಗುದ್ದಿದ್ದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಅಸುನೀಗಿದೆ. ಸಮರ್ಪಕವಾಗಿ ರಸ್ತೆ ಉಬ್ಬುಗಳನ್ನು ಮಾಡದಿರುವುದರಿಂದ ಈ ರೀತಿಯ ಘಟನೆಗಳು ಆಗಾಗ್ಗೆ ಜರುಗುತ್ತಿವೆ. 70-80 ಕಿ.ಮೀ. ವೇಗದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಇದಕ್ಕೆ ಕಡಿವಾನ ಹಾಕಬೇಕೆಂದು ಎಂದು ಸ್ಥಳೀಯ ಪರಿಸರ ಹೋರಾಟಗಾರ ಕೃಷ್ಣ ಒತ್ತಾಯಿಸಿದ್ದಾರೆ.
ಮಲೆಮಹದೇಶ್ವರ ವನ್ಯಜೀವಿಧಾಮ ಹಾಗೂ ಬಿಳಿಗಿರಿರಂಗ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಅಧಿಕಾರಿಗಳು ಭೇಟಿಯಿತ್ತು ಜಿಂಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.