ಚಾಮರಾಜನಗರ: ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಜಿಲ್ಲೆಯಲ್ಲಿ ಲಸಿಕೆ ನೀಡಲಿದ್ದು ಕಡ್ಡಾಯವಾಗಿ ಎಲ್ಲರೂ ಪಡೆಯಬೇಕೆಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.
ಜಿಲ್ಲೆಯಲ್ಲಿ 2 ಲಕ್ಷದ 87 ಸಾವಿರ ಮಂದಿ 45 ವರ್ಷ ಮೇಲ್ಪಟ್ಟವರಿದ್ದು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲಷ್ಟೇ ಅಲ್ಲದೇ 14 ಆರೋಗ್ಯ ಉಪಕೇಂದ್ರಗಳಲ್ಲೂ ಲಸಿಕೆ ನೀಡಲಾಗುತ್ತದೆ ಆಗ ಜಿಲ್ಲೆಯ ಲಸಿಕಾ ಕೇಂದ್ರಗಳು 81ಕ್ಕೇರಲಿದೆ ಎಂದರು.
ಪ್ರತಿ ನಿತ್ಯ ಕನಿಷ್ಠ 5ರಿಂದ 6 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಲಭ್ಯತೆಗೆ ಅನುಸಾರ ಜಿಲ್ಲೆಗೆ ಲಸಿಕೆ ಪೂರೈಕೆಯಾಗುತ್ತಿದೆ. ಲಸಿಕೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಿಲ್ಲ. ಜಿಲ್ಲೆಯಲ್ಲಿ ಇದುವರೆಗೆ ಲಸಿಕೆ ಪಡೆದವರಲ್ಲಿ ಯಾರಿಗೂ ಅಡ್ಡ ಪರಿಣಾಮ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ. ಜಿಲ್ಲೆಯ ಜನರು ಕೋವಿಡ್ ನಿಯಂತ್ರಣಕ್ಕಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ : ಬಟ್ಟೆ ಒಗೆದರು, ಇಸ್ತ್ರಿ ಮಾಡಿದ್ರು, ದೋಸೆ ಹಾಕಿದ್ರು.. ವೋಟು ನಿಮಿತ್ತಂ ಬಹುಕೃತ ವೇಷಂ!