ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆಯಿಂದ ಸಂಜೆವರೆಗೆ ತ್ಯಾಜ್ಯ ಸಂಗ್ರಹ ಅಭಿಯಾನ ನಡೆದಿದ್ದು ಬರೋಬ್ಬರಿ 6 ಟನ್ಗೂ ಅಧಿಕ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗಿದೆ.
ವನ ಮತ್ತು ವನ್ಯಜೀವಿಗಳಿಗೆ ಮಾರಕವಾಗಿರುವ ಪ್ಲಾಸ್ಟಿಕ್ ತ್ಯಾಜ್ಯ ತೆರವು ಕಾರ್ಯಕ್ರಮಕ್ಕೆ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಹನೂರು ತಾಲೂಕಿನ ವಿವಿಧ ಗ್ರಾಮಗಳ ನೂರಾರು ಸಾರ್ವಜನಿಕರು ಈ ಮಹತ್ವದ ಕಾರ್ಯದಲ್ಲಿ ಪಾಲ್ಗೊಂಡು ಕಸ ಸಂಗ್ರಹಣೆ ನಡೆಸಿದರು.
ಕೌದಳ್ಳಿಯಿಂದ ಮಲೆಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯ 35 ಕಿಮೀ ದೂರ ಹಾಗೂ 5 ಕಿಮೀ ಕಾಲುಹಾದಿಯಲ್ಲಿ ಈ ಕಸ ಸಂಗ್ರಹ ಅಭಿಯಾನ ನಡೆದಿದ್ದು, 350ಕ್ಕೂ ಹೆಚ್ಚು ಮಂದಿ ಸ್ವಯಂ ಸೇವಕರು ಭಾಗಿಯಾಗಿದ್ದರು.