ಚಾಮರಾಜನಗರ: ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಮೀಸಲಾತಿ ಹೆಚ್ಚಿಸುತ್ತೇವೆ. ಈ ಮೂಲಕ ಸಿಹಿ ಸುದ್ದಿ ಕೊಟ್ಟೇ ಕೊಡುತ್ತೇವೆ ಎಂದು ಸಚಿವ ಶ್ರೀರಾಮುಲು ಹೇಳಿದರು. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬದ್ಧತೆ ಪ್ರದರ್ಶಿಸುತ್ತದೆ. ಈಗ ಹೋರಾಟ ಮಾಡುವವರು ಮುಂದೊಂದು ದಿನ ಕುಣಿದಾಡುವಂತೆ ಬೊಮ್ಮಾಯಿ ಸರ್ಕಾರ ಮಾಡಲಿದೆ. ಪರಿಶಿಷ್ಟ ಜಾತಿಗೆ ಶೇ. 17 ರಷ್ಟು ಮತ್ತು ಪರಿಶಿಷ್ಟ ವರ್ಗಕ್ಕೆ ಶೆ.7.5 ರಷ್ಟು ಮೀಸಲಾತಿ ಕೊಡುವ ಕೆಲಸ ಆದಷ್ಟು ಶೀಘ್ರ ಆಗಲಿದೆ ಎಂದರು.
-
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಆಗಮಿಸಿದ ವೇಳೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು. ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಅಭಾರಿಯಾಗಿದ್ದೇನೆ. pic.twitter.com/AYW5wnP1qS
— B Sriramulu (@sriramulubjp) July 12, 2022 " class="align-text-top noRightClick twitterSection" data="
">ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಆಗಮಿಸಿದ ವೇಳೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು. ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಅಭಾರಿಯಾಗಿದ್ದೇನೆ. pic.twitter.com/AYW5wnP1qS
— B Sriramulu (@sriramulubjp) July 12, 2022ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲಕ್ಕೆ ಆಗಮಿಸಿದ ವೇಳೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು. ಅಭಿಮಾನಿಗಳ ಪ್ರೀತಿ, ವಿಶ್ವಾಸಕ್ಕೆ ನಾನು ಸದಾ ಅಭಾರಿಯಾಗಿದ್ದೇನೆ. pic.twitter.com/AYW5wnP1qS
— B Sriramulu (@sriramulubjp) July 12, 2022
ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರ ನಡೆಸಿ ಎಸ್ಸಿ-ಎಸ್ಟಿ ಸಮುದಾಯದವರನ್ನು ವೋಟ್ ಬ್ಯಾಂಕ್ ಆಗಿ ಮಾಡಿಕೊಂಡಿದ್ದರು. ಈಗ ನಮ್ಮ ಸರ್ಕಾರ ಇದೆ ಎಂದು ಹರಿಹಾಯುತ್ತಿದ್ದಾರೆ. ಕಾಂಗ್ರೆಸ್ನವರು ವಾಲ್ಮೀಕಿ ಪ್ರತಿಮೆ ಸ್ಥಾಪಿಸಿದ್ದು ಬಿಟ್ಟರೆ ಇನ್ಯಾವ ಕೆಲಸವನ್ನೂ ಅವರು ಮಾಡಿಲ್ಲ. ಮೀಸಲಾತಿ ನೀಡಲು ನಮ್ಮ ಪಾಳಿ ಬಂದಿದೆ, ನಾವು ಕೊಡುತ್ತೇವೆ. ಈ ಹಿಂದೆ, ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಜಯಂತಿ ಮಾಡಲಾಯಿತು. ತಳವಾರ-ಪರಿವಾರವನ್ನು ಎಸ್ಟಿಗೆ ಸೇರಿಸಲಾಯಿತು. ವಾಲ್ಮೀಕಿ ಭವನ ನಿರ್ಮಾಣ ನಮ್ಮ ಕಾಲದಲಿ ಆಯಿತು. ಇದನ್ನು ಯಾರೂ ಮರೆಯಬಾರದು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಇಂದು ಶ್ರೀರಾಮುಲು ಜಿಲ್ಲಾ ಪ್ರವಾಸದಲ್ಲಿದ್ದು ವಿವಿಧ ಶಾಲೆಗಳ ನೂತನ ಕಟ್ಟಡ ಉದ್ಘಾಟನೆ, ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಚಾಮರಾಜಪೇಟೆ ಬಂದ್: ಪ್ರತಿಭಟನಾಕಾರರು-ಪೊಲೀಸರ ಮಧ್ಯೆ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ