ಕೊಳ್ಳೇಗಾಲ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ, ಅದರ ಬಣ್ಣ ಬದಲಾಗುತ್ತಿದೆ. ಈ ಪ್ರಕರಣದಲ್ಲಿ ಅವರು ಇವರು ಅಂತಾ ಬೇಧವಿಲ್ಲ. ತಪಿತಸ್ಥರ ವಿರುದ್ಧ ಕ್ರಮ ವಹಿಸಲಾಗುತ್ತೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ತಪ್ಪಿತಸ್ಥರು ಯಾರೇ ಆದರೂ ನಾವು ಬಿಡುವುದಿಲ್ಲ. ಕೆಲ ಶಾಸಕರು ಮತ್ತು ಅವರ ಮಕ್ಕಳ ಹೆಸರುಗಳು ಸಹ ಕೇಳಿ ಬರುತ್ತಿವೆ. ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಆದರೂ ಸಹ ಶಿಕ್ಷೆ ಖಂಡಿತ. ಕಾನೂನು ಎಲ್ಲರಿಗೂ ಒಂದೇ, ಕಾನೂನಿಗೆ ಎಲ್ಲರೂ ಸಹ ತಲೆಬಾಗಲೇಬೇಕು ಎಂದರು.
ನಾಡಹಬ್ಬ ದಸರಾ ಚಾಲನೆಗೆ ಕೋವಿಡ್-19 ವಿರುದ್ಧ ಹೋರಾಟ ನಡೆಸಿದ ಆಶಾ ಕಾರ್ಯಕರ್ತೆಯರು, ವೈದ್ಯರು, ಪೌರಕಾರ್ಮಿಕರು, ಪೊಲೀಸರು, ನರ್ಸ್ಗಳ ಹೆಸರನ್ನು ಈಗಾಗಲೇ ಸೂಚಿಸಿದ್ದೇವೆ. ಈ ಬಗ್ಗೆ ಮೈಸೂರಿನಲ್ಲಿ ಶನಿವಾರ ಸಭೆ ನಡೆಯುತ್ತದೆ. ನಂತರ ಮಾಹಿತಿ ಹೇಳುತ್ತೇನೆ ಎಂದರು.
ಹೆಚ್ ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನವನ್ನು ನೀಡುವ ಅಧಿಕಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೈಯಲ್ಲಿದೆ. ಅದು ಸಚಿವರ ಕೈಯಲ್ಲಿ ಇರುವುದಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.