ETV Bharat / state

ಪ್ರತ್ಯೇಕ ಪ್ರಕರಣ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ, ಅಪರಿಚಿತ ವ್ಯಕ್ತಿಯ ಶವ ಪತ್ತೆ..! - Woman commits suicide by jumping into lake

ಚಾಮರಾಜನಗರದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನೊಂದು ಕಡೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

Woman commits suicide by jumping into lake
ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
author img

By

Published : Aug 12, 2020, 8:49 PM IST

ಚಾಮರಾಜನಗರ: ತಾಲೂಕಿನ ಕೆರೆಹಳ್ಳಿ ಕೆರೆಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಹಳೇಹುಂಡಿ ಗ್ರಾಮದ ನಾಗಮ್ಮ(65) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ತೀವ್ರ ಅನಾರೋಗ್ಯ ಮತ್ತು ಬಡತನದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ಶವಪತ್ತೆ: ಇನ್ನು ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರ ಗ್ರಾಮದ ಕಾವೇರಿ ನದಿ ಸಮೀಪ ಅಪರಿಚಿತ ವ್ಯಕ್ತಿಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನದಿ ಸಮೀಪದ ಬಸವಣ್ಣ ಎಂಬುವರ ಜಮೀನು ಬಳಿ ನೀಲಿಗಿರಿ ತೋಪಿನಲ್ಲಿ, ತಿಳಿ ಆಕಾಶ ಬಣ್ಣದ ಶರ್ಟ್, ಕಪ್ಪು ಪ್ಯಾಂಟ್ ಧರಿಸಿರುವ ಸುಮಾರು 50 ರಿಂದ 55 ವರ್ಷದ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದೆ.

ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ, ಸ್ಥಳದಲ್ಲೇ ಅಂತ್ಯಸಂಸ್ಕಾರ ನೆರವೇರಿಸಿ ಪ್ರಕರಣ ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.