ಕೊಳ್ಳೇಗಾಲ: ಹೊಟ್ಟೆನೋವು ತಳಲಾರದೇ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರಗೂರು ಗ್ರಾಮದಲ್ಲಿ ನಡೆದಿದೆ.
ಸರಗೂರು ಗ್ರಾಮದ ರವಿಕುಮಾರ್ ಎಂಬುವವರ ಪತ್ನಿ ಶಶಿಕಲಾ(25) ನೇಣಿಗೆ ಶರಣಾದ ಗೃಹಿಣಿ. ಈಕೆಗೆ ಕಳೆದ ಕೆಲ ದಿನಗಳಿಂದ ಬೆನ್ನುನೋವು ಹಾಗೂ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಈ ಸಂಬಂಧ ಸಾಕಷ್ಟು ಬಾರಿ ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಂಡರೂ ಸಹ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಘಟನೆ ಕುರಿತು ಮೃತ ಮಹಿಳೆಯ ತಾಯಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.