ETV Bharat / state

Free Bus: ಚಾಮರಾಜನಗರದಲ್ಲಿ ಶಕ್ತಿ ಯೋಜನೆಗೆ ಚಾಲನೆ ಕೊಟ್ಟ ಉಸ್ತುವಾರಿ ಸಚಿವ ಕೆ ವೆಂಕಟೇಶ್​.. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಮಹಿಳೆಯರ ಜೈಕಾರ - ವೆಂಕಟೇಶ್ ಚಾಲನೆ ನೀಡಿದರು

ಚಾಮರಾಜನಗರದಲ್ಲಿಂದು ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ನೀಡಿದರು.

Etv Bharatwomens-reaction-on-free-bus-scheme-in-chamarajagara
free bus: ಚಾಮರಾಜನಗರದಲ್ಲಿ ಶಕ್ತಿ ಯೋಜನೆಗೆ ಚಾಲನೆ - ಮಹಿಳೆಯರು ಹೇಳಿದ್ದೇನು?
author img

By

Published : Jun 11, 2023, 5:47 PM IST

Updated : Jun 11, 2023, 6:03 PM IST

ಚಾಮರಾಜನಗರದಲ್ಲಿ ಶಕ್ತಿ ಯೋಜನೆಗೆ ಚಾಲನೆ

ಚಾಮರಾಜನಗರ: ಕಾಂಗ್ರೆಸ್​ನ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇಂದು ಚಾಮರಾಜನಗರದಲ್ಲಿ ಚಾಲನೆ ದೊರೆಯಿತು. ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಟಿಕೆಟ್​ ಕೊಡುವ ಮೂಲಕ ಶಕ್ತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಚಾಲನೆ ನೀಡಿದರು. ಟಿಕೆಟ್ ಪಡೆಯುತ್ತಿದ್ದ ಮಹಿಳೆಯರು ಸಿದ್ದರಾಮಯ್ಯಗೆ ಜೈ, ಕಾಂಗ್ರೆಸ್ ಪಕ್ಷಕ್ಕೆ ಜೈ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.

ನಂತರ ಸಚಿವ ವೆಂಕಟೇಶ್ ಮಾತನಾಡಿ, ಇಂದಿನಿಂದ ಉಚಿತ ಬಸ್ ಪ್ರಯಾಣ ಆರಂಭವಾಗುತ್ತಿದೆ. ಮೈಸೂರಿಗೆ ಹೋಗುವವರು ಚಾಮುಂಡಿ ಬೆಟ್ಟಕ್ಕೆ ಹೋಗಿ, ಅಲ್ಲಿ ದೇವರ ದರ್ಶನ ಪಡೆದು ಒಳ್ಳೆಯಾದಗಲಿ ಎಂದು ಕೇಳಿಕೊಳ್ಳಿ ಎಂದರು. ಕಾಂಗ್ರೆಸ್​ನ ಶಕ್ತಿ ಯೋಜನೆಯಿಂದ ವಾರ್ಷಿಕ 4000 ಕೋಟಿ ಹೊರೆ ಬೀಳಲಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ ಯಾವ ಮೂಲೆಯಿಂದ ಖಜಾನೆಗೆ ಹಣ ತರಬೇಕೆಂದು, ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆ ಸುಳ್ಳು, ಜಾರಿಯಾಗುವುದೇ ಇಲ್ಲಾ ಎಂದು ಹೇಳುತ್ತಿದ್ದರು. ಆದರೆ ಇಂದು ಮೊದಲ ಹೆಜ್ಜೆ ಇಟ್ಟಿದ್ದೇವೆ ಎಂದು ವಿಪಕ್ಷಗಳಿಗೆ ಟಾಂಗ್ ಕೊಟ್ಟರು.

ದೇಶದಲ್ಲೇ ಮಾದರಿ ಸರ್ಕಾರ: ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯನ್ನು ಜಾರಿ ಮಾಡುವ ಮೂಲಕ ದೇಶದಲ್ಲೇ ಕರ್ಣಾಟಕ ಮಾದರಿ ಸರ್ಕಾರ ಎನಿಸಿಕೊಂಡಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲೇ ಆರ್ಥಿಕ ವಿಚಾರದ ಮೇಧಾವಿ ಎನಿಸಿಕೊಂಡಿದ್ದಾರೆ. ನಾವೆಲ್ಲಾ ರೂಪಿಸಿರುವುದು ಬಡವರ ಪರ ಕಾರ್ಯಕ್ರಮವಾಗಿದ್ದು ಮುಂದಿನ ದಿನಗಳಲ್ಲೂ ನಮ್ಮನ್ನು ಬೆಂಬಲಿಸಬೇಕೆಂದು ಕೋರಿದರು. ಇನ್ನು ಇಂದಿನಿಂದ ಉಚಿತ ಬಸ್ ಪ್ರಯಾಣ ಆರಂಭವಾದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಮಹಿಳರ ದಂಡು ಕಂಡುಬಂದಿತು.

ಪ್ರಯಾಣಿಕೆ ಶಾಹಿದಾ ಬಾನು ಮಾತನಾಡಿ, ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಯೋಜನೆಯನ್ನು ಜಾರಿಗೆ ತಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತು ಕಾಂಗ್ರೆಸ್​ ಪಕ್ಷಕ್ಕೆ ಹೃತ್ಪೂರ್ವಕ ವಂದನೆಗಳು. ಗಾಂಧಿಜಿ ಹೇಳಿದಂತೆ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. ಇದರಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದರು.

ಪ್ರಯಾಣಿಕೆ ನಯಿದಾ ಮಾತನಾಡಿ, ಇಷ್ಟು ವರ್ಷ ರಾಜಕೀಯದಲ್ಲಿ ಈ ರೀತಿಯ ಯೋಜನೆಯನ್ನು ಯಾರು ಜಾರಿಗೆ ತಂದಿರಲಿಲ್ಲ, ಇದರಿಂದ ಬಡವರಿಗೆ ಅನುಕೂಲವಾಗಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್​ ಹಾಗೂ ನಾಲ್ಕು ಬಾರಿ ಗೆದ್ದಿರುವ ಪುಟ್ಟರಂಗ ಶೆಟ್ಟಿಯವರಿಗೆ ಎಷ್ಟು ಧನ್ಯವಾದಗಳನ್ನು ಹೇಳಿದರೂ ಕಡೆಮೆ ಎಂದು ಸಂತಸ ವ್ಯಕ್ತಪಡಿಸಿದರು. ಪ್ರಯಾಣಿಕೆ ಸವಿತಾ ಮಾತನಾಡಿ, ಉಚಿತ ಬಸ್ ಪ್ರಯಾಣದ ಯೋಜನೆ ಜಾರಿಗೆ ತಂದಿರುವದಕ್ಕೆ ತುಂಬಾ ಖುಷಿಯಾಗುತ್ತಿದೆ. ಈ ಯೋಜನೆಯನ್ನು ಜಾರಿಗೆ ತಂದು ಸಿಎಂ ಸಿದ್ದರಾಮಯ್ಯ ಅವರು ಬಡವರಿಗೆ ಒಳ್ಳೆಯದು ಮಾಡಿದ್ದಾರೆ. ನಾವು ಮದುವೆಗಾಗಿ ಇಲ್ಲಿಗೆ ಬಂದಿದ್ದು, ಈಗ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದೇವೆ ಎಂದರು.

ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ: ರಾಜ್ಯದ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ವಿಧಾನಸೌಧ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ.

ಇದನ್ನೂ ಓದಿ:Free Bus: ಉಚಿತ ಬಸ್​ ಪ್ರಯಾಣ ಶುರು - ಸಂತಸ ವ್ಯಕ್ತಪಡಿಸಿದ ಮಹಿಳೆಯರು

Last Updated : Jun 11, 2023, 6:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.