ಕೊಳ್ಳೆಗಾಲ: ಹೊಟ್ಟೆನೋವು ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೆಗಾಲ ತಾಲೂಕಿನ ವ್ಯಾಪ್ತಿಯಲ್ಲಿ ಜರುಗಿದೆ.
29 ವರ್ಷದ ಭೀಮನಗರ ಪನ್ನಾಬೀದಿ ನಿವಾಸಿ ಜಯಮಾಲಾ ಎಂಬುವವರು ಹೊಟ್ಟೆನೋವು ತಾಳಲಾರದೆ ಸೋಮವಾರ ನೇಣಿಗೆ ಶರಣಾಗಿದ್ದಾರೆ.
ಮಹಿಳೆಗೆ ಹಲವಾರು ವರ್ಷಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಬೇಸತ್ತು ಮನೆಯ ರೂಮಿನಲ್ಲಿ ಜಂತಿಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ:ನವಜಾತ ಶಿಶು ಕದ್ದು 15 ಲಕ್ಷ ರೂ.ಗೆ ಮಾರಿದ್ದ ಖತರ್ನಾಕ್ ವೈದ್ಯೆ ಅರೆಸ್ಟ್