ಚಾಮರಾಜನಗರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲಾಯಿತು.
ಚಾಮರಾಜನಗರದಲ್ಲಿ ಪ್ರವಾಸೋದ್ಯಮ ದಿನಾಚರಣೆ ಜಾನಪದ ಕಲಾವಿದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿ ನೆಪದಲ್ಲಿ ಪರಿಸರ ಹಾಳಾಗದಂತೆ ನೋಡಿಕೊಳ್ಳುವ ಕರ್ತವ್ಯ ಎಲ್ಲರ ಮೇಲಿದೆ, ದೇಶ ಸುತ್ತು- ಕೋಶ ಓದು ಎಂಬ ಮಾತಿನಲ್ಲಿ ಸಿಗುವ ಅನುಭವ ಅಪಾರವಾದುದು ಎಂದರು. ಚಾಮರಾಜನಗರ ಜಿಲ್ಲೆಯಲ್ಲಿರುವ ಪ್ರೇಕ್ಷಣೀಯ ತಾಣಗಳು ಬೇರೆ ಯಾವ ಜಿಲ್ಲೆಯಲ್ಲೂ ಇಲ್ಲ, ಮುಂದಿನ ದಿನಗಳಲ್ಲಿ ಗಡಿಜಿಲ್ಲೆ ಪ್ರವಾಸೋದ್ಯಮದಿಂದ ಹೆಚ್ಚು ಅನುಕೂಲವನ್ನು ಪಡೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದಕ್ಕೂ ಮುನ್ನ ಜಿಲ್ಲಾ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಮಾಹಿತಿ ಇರುವ ಕಿರುಹೊತ್ತಿಗೆಯನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಡುಗಡೆಗೊಳಿಸಿದರು. ಜೊತೆಗೆ, ಸಚಿವರು ಜಿಲ್ಲೆಯ ಉಸ್ತುವಾರಿ ವಹಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಅಭಿವೃದ್ಧಿ ಮಾಹಿತಿ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.