ಚಾಮರಾಜನಗರ: ಯುವ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಿ.ಆರ್.ಟಿ. ಅರಣ್ಯದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಮೂರ್ತಿ ಹಾಗೂ ಗೌರಮ್ಮ ವಿಷ ಸೇವಿಸಿದ ಪ್ರೇಮಿಗಳು. ಗೌರಮ್ಮ ಹಾಗೂ ಮೂರ್ತಿ ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದು, ಗೌರಮ್ಮನಿಗೆ ಈಗಾಗಲೇ ಮದುವೆಯಾಗಿದೆ ಎಂದು ತಿಳಿದುಬಂದಿದೆ.
ತಮ್ಮ ನಡುವೆ ಇನ್ನು ಮದುವೆಯಾಗದು ಎಂದು ಅರಿತು, ಇಲ್ಲವೇ ಕುಟುಂಬಕ್ಕೆ ಹೆದರಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕುರಿತು ಯಳಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.