ಚಾಮರಾಜನಗರ : ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂನಲ್ಲಿ ನಡೆದಿದೆ. ಕಲ್ಲಹಳ್ಳಿ ಗ್ರಾಮದ ಸಚಿನ್(24) ಮೃತ ಯುವಕ ಎಂದು ತಿಳಿದುಬಂದಿದೆ.
ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಾಯುವ ಮುನ್ನ ತನ್ನ ಸ್ನೇಹಿತರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ನಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಮನೆಯವರಿಗೆ ತಿಳಿಸುವಂತೆ ಹೇಳಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ರಸ್ತೆ ಅಪಘಾತ.. ಸಿಐಡಿ ಮಹಾನಿರ್ದೇಶಕ ಗೋವಿಂದ್ ಸಿಂಗ್ ಪತ್ನಿ ಸಾವು