ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 120 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವನ್ನಪ್ಪಿದ್ದಾರೆ. ಜೊತೆಗೆ 129 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ 38, ಚಿಂತಾಮಣಿ 15, ಗೌರಿಬಿದನೂರು 55, ಗುಡಿಬಂಡೆ 4, ಶಿಡ್ಲಘಟ್ಟದಲ್ಲಿ 8 ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9,194 ಕ್ಕೆ ಏರಿಕೆಯಾಗಿದೆ.
ಇನ್ನು ಚಿಕ್ಕಬಳ್ಳಾಪುರ 67, ಬಾಗೇಪಲ್ಲಿ 12, ಚಿಂತಾಮಣಿ 13, ಗೌರಿಬಿದನೂರು 14, ಗುಡಿಬಂಡೆ 8, ಶಿಡ್ಲಘಟ್ಟದ 15 ಸೋಂಕಿತರು ಕೊರೊನಾದಿಂದ ಸಂಪೂರ್ಣ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 8,023 ಕ್ಕೆ ಏರಿಕೆಯಾಗಿದೆ.
ಇಂದು ಚಿಕ್ಕಬಳ್ಳಾಪುರ ಮೂಲದ 74 ವರ್ಷದ ಪುರುಷರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 97 ಕ್ಕೆ ಏರಿಕೆಯಾಗಿದೆ.