ETV Bharat / state

ಚಿಕ್ಕಬಳ್ಳಾಪುರದಲ್ಲಿ ಕೋವಿಡ್​ ಅಟ್ಟಹಾಸ: ಇಂದು 13 ಮಂದಿಗೆ ಕೊರೊನಾ ದೃಢ

ಚಿಕ್ಕಬಳ್ಳಾಪುರದಲ್ಲಿ ಕೋವಿಡ್​ 19 ಅಟ್ಟಹಾಸ ಮೆರೆಯುತ್ತಿದ್ದು, ಇಂದು 13 ಮಂದಿಗೆ ಕೊರೊನಾ ಇರುವುದಾಗಿ ವರದಿ ಬಂದಿದೆ.

ಚಿಕ್ಕಬಳ್ಳಾಪುರದಲ್ಲಿ ಕೋವಿಡ್​ ಅಟ್ಟಹಾಸ
ಚಿಕ್ಕಬಳ್ಳಾಪುರದಲ್ಲಿ ಕೋವಿಡ್​ ಅಟ್ಟಹಾಸ
author img

By

Published : Jun 30, 2020, 7:25 PM IST

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇಂದು 13 ಜನರಿಗೆ ಕೊರೊನಾ ದೃಢಪಟ್ಟಿದೆ. ಸದ್ಯ ಜಿಲ್ಲೆಯಲ್ಲಿ ‌ಸೋಂಕಿತರ ಸಂಖ್ಯೆ 214 ಕ್ಕೆ ಏರಿಕೆಯಾಗಿದೆ.

5 ಮಹಿಳೆಯರು ಹಾಗೂ 5 ಪುರುಷರಿಗೆ ಸೋಂಕು ದೃಢಪಟ್ಟಿದೆ. ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು ವ್ಯಾಪ್ತಿಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಇದರಲ್ಲಿ ಮೂವರಿಗೆ ಪಿ-9916ರ ಸಂಪರ್ಕದಿಂದ ಸೋಂಕು ಹರಡಿದ್ದು, ಉಳಿದ ಸೋಂಕಿತರೆಲ್ಲರೂ ಬೆಂಗಳೂರಿಗೆ ಹೋಗಿ ಬಂದವರಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕೋವಿಡ್​ ಅಟ್ಟಹಾಸ
ಚಿಕ್ಕಬಳ್ಳಾಪುರದಲ್ಲಿ ಕೋವಿಡ್​ ಅಟ್ಟಹಾಸ

ಕಳೆದ ದಿನವೂ ಸಹ ಬಹುತೇಕ ಪ್ರಕರಣಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಹಿನ್ನೆಲೆಯಲ್ಲಿ ಕಂಡುಬಂದಿದ್ದವು. ಒಟ್ಟಾರೆ ಇಂದು 13 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಒಟ್ಟು 6 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 44 ಮಂದಿ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.