ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಒಂದೇ ಗ್ರಾಮದ ಸುಮಾರು ಹದಿನೈದು ಮನೆಗಳ ಗೋಡೆ ಕುಸಿತಗೊಂಡ ಘಟನೆ ನಡೆದಿದೆ.
ಚಿಂತಾಮಣಿ ತಾಲೂಕಿನ ಹಿರೇಪಾಳ್ಯ ಗ್ರಾಮದಲ್ಲಿ ಮಹಾಮಳೆಯ ಪರಿಣಾಮ 15 ಕುಟುಂಬಗಳು ಬೀದಿಗೆ ಬಂದಿವೆ. ವಸತಿ ಕಳೆದುಕೊಂಡ ಜನರು ಮಳೆಯಲ್ಲಿ ನಿಂತು ಕಣ್ಣೀರಿಡುವಂತಾಗಿದೆ.
ಇಷ್ಟೆಲ್ಲಾ ಅನಾಹುತ ಸಂಭವಿಸಿದ್ದರೂ ಇದುವರೆಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸರಿಸುಮಾರು 50ಕ್ಕೂ ಹೆಚ್ಚು ಮನೆಗಳ ಗೋಡೆ ಕುಸಿತವಾಗಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೇ, ಸುಮಾರು 90 ಕೋಟಿಗೂ ಅಧಿಕ ಮೌಲ್ಯದ ಬೆಳೆ ನಷ್ಟವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ಯಾದಗಿರಿ : 5 ತಿಂಗಳ ಮಗುವಿನ ಜತೆಗೇ ಕರ್ತವ್ಯಕ್ಕೆ ಹಾಜರಾದ ಮಹಿಳಾ ಕಾನ್ಸ್ಟೇಬಲ್..