ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ 164 ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಇಂದು ಬಿಡುಗಡೆಗೊಂಡಿದ್ದರೆ, ಒಂದು ವರ್ಷದ ಮಗು ಸೇರಿದಂತೆ 40 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಜಿಲ್ಲೆಯಲ್ಲಿ ಇಂದು ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಈ ಕುರಿತು ಜಿಲ್ಲಾಡಳಿತ ಸಂತಸ ವ್ಯಕ್ತಪಡಿಸಿದೆ. ಇಂದು 40 ಹೊಸ ಸೋಂಕಿತರು ದೃಢಪಟ್ಟಿದ್ದು, ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 21, ಬಾಗೇಪಲ್ಲಿ 2, ಚಿಂತಾಮಣಿ 8, ಗೌರಿಬಿದನೂರು 6 ಹಾಗೂ ಗುಡಿಬಂಡೆ ವ್ಯಾಪ್ತಿಯಲ್ಲಿ 3 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,479 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, 815 ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದಾರೆ. 633 ಜನ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.