ಚಿಕ್ಕಬಳ್ಳಾಪುರ : ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ 21 ಲಕ್ಷ ಹಣವನ್ನು ವಶಪಡಿಸಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು ಜೂಜಿನಲ್ಲಿ ತೊಡಗಿದ್ದ 17 ಜೂಜುಕೋರರನ್ನು ಬಂದಿಸಿದ್ದು, 24,70,000 ನಗದು 21 ಮೊಬೈಲ್ ಗಳು ಮತ್ತು17 ಬೈಕ್ ಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು ನ್ಯಾಯಾಂಗ ಬಂದನಕ್ಕೆ ಒಳಪಡಿಸಿದ್ದಾರೆ.