ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 171 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 144, ಚಿಂತಾಮಣಿ 12, ಗೌರಿಬಿದನೂರು 4, ಬಾಗೇಪಲ್ಲಿ 7, ಶಿಡ್ಲಘಟ್ಟ 4 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಜಿಲ್ಲೆಯಾದ್ಯಂತ ಇಂದು 171 ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತ ಸೋಂಕಿತರ ಸಂಖ್ಯೆ 41 ಕ್ಕೆ ಏರಿಕೆಯಾಗಿದೆ.
ಇವರ ಪೈಕಿ ಒಬ್ಬರಿಗೆ ಐಎಲ್ಐ ಸಂಪರ್ಕ, ಇಬ್ಬರಿಗೆ ಸ್ಥಳೀಯ ಪ್ರಯಾಣದ ಇತಿಹಾಸ ಹಾಗೂ ಉಳಿದ 168 ಜನರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ.
ಚಿಂತಾಮಣಿಯಲ್ಲಿ 14 ಚಿಕ್ಕಬಳ್ಳಾಪುರ 26, ಗೌರಿಬಿದನೂರು 17 ಶಿಡ್ಲಘಟ್ಟ 10, ಬಾಗೇಪಲ್ಲಿ 7 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ 743 ಸಕ್ರಿಯ ಸೋಂಕಿತರಿಗೆ ಜಿಲ್ಲೆಯ ಐಸೊಲೇಷನ್ ಸೇರಿದಂತೆ ತಾಲೂಕಿನ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.