ಚಿಕ್ಕಬಳ್ಳಾಪುರ /ಚಿಂತಾಮಣಿ: ಕಳೆದ ನಾಲ್ಕು ದಿನಗಳ ಹಿಂದೆ ಚಿನ್ನಸಂದ್ರ ಗ್ರಾಮದಲ್ಲಿ 45 ವರ್ಷದ ವ್ಯಕ್ತಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದ್ದು, ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್ ಬಂದಿದೆ.
ವ್ಯಕ್ತಿಗೆ ಕೊರೊನಾ ಸೋಂಕು ಕಂಡು ಬಂದ ಕೂಡಲೇ ಚಿನ್ನಸಂದ್ರ ಗ್ರಾಮ ಪಂಚಾಯತ್ ಸಿಬ್ಬಂದಿ, ಆರೋಗ್ಯ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೊರೊನಾ ದೃಢಪಟ್ಟಿರುವ ವ್ಯಕ್ತಿ ವಾಸಿಸುತ್ತಿದ್ದ ಬೀದಿಯನ್ನು ಸೀಲ್ ಡೌನ್ ಮಾಡಿದ್ದರು. ಜೊತೆಗೆ ಅವರ ಸಂಪರ್ಕದಲ್ಲಿದ್ದ 18 ಮಂದಿಯನ್ನು ಕ್ವಾರಂಟೈನ್ ಮಾಡಿ, ಗಂಟಲು ದ್ರವದ ಪರೀಕ್ಷೆಗೆ ಕಳುಹಿಸಿದ್ದರು. ಇಂದು 18 ಮಂದಿಯ ವರದಿ ನೆಗೆಟಿವ್ ಬಂದಿದೆ.
ಸೀಲ್ ಡೌನ್ ಮಾಡಿರುವ ಬೀದಿ ಸೇರಿದಂತೆ ಗ್ರಾಮದ ಹಲವು ಬೀದಿಗಳಿಗೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಗ್ರಾಮ ಪಂಚಾಯತ್ ವತಿಯಿಂದ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಜೊತೆಗೆ ಗ್ರಾಮದ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.