ಗೌರಿಬಿದನೂರು (ಚಿಕ್ಕಬಳ್ಳಾಪುರ): ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಹಾಗೂ ಸರ್ಕಾರದ ಅದೀನ ಸಂಸ್ಥೆಗಳಾದ ನಿರ್ಮಿತಿ ಕೇಂದ್ರಗಳಲ್ಲಿ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗಳಲ್ಲಿ ಜಿಲ್ಲಾದ್ಯಂತ ಸುಮಾರು 20 ಕೋಟಿಗಳ ಅವ್ಯವಹಾರ ನಡೆದಿದೆ ಎಂದು ದಲಿತ ಮುಖಂಡ ಸಿ.ಜಿ.ಗಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು. ಆಳುವ ಸರ್ಕಾರಗಳು ಕೂಡ ಯಾವುದೇ ನೈತಿಕ ಬದ್ದತೆ ಇಲ್ಲದೆ ಈ ವಿಚಾರದಲ್ಲಿ ಮೌನ ವಹಿಸಿರುವುದು ಖಂಡನೀಯ.
ದಲಿತರ ಅರ್ಥಿಕ ಅಭಿವೃದ್ದಿಗಾಗಿ ಸರ್ಕಾರದಿಂದ ಹಣ ಬಿಡುಗಡೆಯಾಗುತ್ತಿದೆ. ಆದರೆ, ಈ ಹಣ ಪರಿಶಿಷ್ಟ ಕಲ್ಯಾಣಕ್ಕಾಗಿ
ಸದ್ಬಳಕೆ ಆಗುತ್ತಿಲ್ಲ ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬ ರೀತಿಯಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳ
ಜೇಬು ತುಂಬುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.