ಚಿಕ್ಕಬಳ್ಳಾಪುರ : ಕೃಷಿ ಇಲಾಖೆಯ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 234ರ ಪಿಂಡಿಪಾಪನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಕೃಷಿ ಅಧಿಕಾರಿ ವಿನಯ್ ಕುಮಾರ್ ಮತ್ತು ತಾಂತ್ರಿಕ ವ್ಯವಸ್ಥಾಪಕ ಲೋಕೇಶ್ ಎಂದು ಗುರುತಿಸಲಾಗಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಂಬಾಜಿ ದುರ್ಗಾ ಹೋಬಳಿ ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಘಟನೆ ಅಧಿಕಾರಿಗಳು ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದಾಗ ನಡೆದಿದೆ. ಡಿಕ್ಕಿ ಹೊಡೆದು ಅಪರಿಚಿತ ವಾಹನ ನಿಲ್ಲಿಸದೇ ಹೋಗಿದೆ.
ಸದ್ಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ ಪ್ರಕರಣ: ಶಸ್ತ್ರಾಸ್ತ್ರ ಪೂರೈಸಿದ್ದ ಆರೋಪಿ ಕಾಲಿಗೆ ಗುಂಡೇಟು