ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ 5,396 ನಾಮಪತ್ರ ಸಲ್ಲಿಕೆಯಾಗಿವೆ.
ಮೊದಲ ಹಂತದಲ್ಲಿ 84 ಗ್ರಾಮ ಪಂಚಾಯತ್‌ಗಳಲ್ಲಿ ಒಟ್ಟು 1,348 ಸ್ಥಾನಗಳಿಗೆ 5,396 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೊದಲ ಹಂತದಲ್ಲಿ ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ ತಾಲೂಕಿನ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಯಲಿದೆ.
ಕಳೆದ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ನಡುವೆ ಬಿಗ್ ಫೈಟ್ ನಡೆದಿತ್ತು. ಇದೀಗ ಬಿಜೆಪಿ ಅಧಿಕಾರದಲ್ಲಿರುವ ಹಿನ್ನೆಲೆ ತ್ರಿಕೋನ ಸ್ಪರ್ಧೆ ಏರ್ಪಡಲಿದ್ದು, ಚುನಾವಣೆಗೆ ಭರ್ಜರಿ ತಯಾರಿ ನಡೆಸಲಾಗಿದೆ.