ಚಿಕ್ಕಬಳ್ಳಾಪುರ: ತಾಲೂಕಿನ ಹಿರೇನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ವೇಳೆ 6 ಮಂದಿ ಮೃತಪಟ್ಟಿದ್ದು, ಮೃತರ ಫೋಟೋಗಳು ಲಭ್ಯವಾಗಿವೆ.
ಸ್ಫೋಟದಿಂದ ಮೃತದೇಹಗಳು ಛಿದ್ರ ಛಿದ್ರವಾಗಿ ಕಲ್ಲು ಕ್ವಾರಿಯಲ್ಲಿ ತೂರಿಬಿದ್ದಿದ್ದು, ಮೃತರನ್ನು ಗಂಗಾಧರ, ಅಭಿ, ಮುರಳಿ, ಮಹೇಶ್, ರಾಮು, ಉಮಾಕಾಂತ್ ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನದಲ್ಲಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟಗೊಂಡಿದೆ ಎನ್ನಲಾಗ್ತಿದೆ. ಜಿಲೆಟಿನ್ ಸಾಗಿಸುತ್ತಿದ್ದ ಟಾಟಾ ಏಸ್ ಡ್ರೈವರ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಚ್ಚೇಗೌಡ, ಜಿಲ್ಲಾಧಿಕಾರಿ ಆರ್.ಲತಾ, ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.