ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 74 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 17 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,103ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಚಿಕ್ಕಬಳ್ಳಾಪುರ 15, ಚಿಂತಾಮಣಿ 9, ಗೌರಿಬಿದನೂರು 36, ಬಾಗೇಪಲ್ಲಿ 6 ಹಾಗೂ ಗುಡಿಬಂಡೆಯಲ್ಲಿ 3, ಶಿಡ್ಲಘಟ್ಟ 5 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 13 ಸೋಂಕಿತರಿಗೆ ಐಎಲ್ಐ ಸಂಪರ್ಕ ಹಾಗೂ 22 ಜನರಿಗೆ ಟ್ರಾವೆಲ್ ಹಾಗೂ ಉಳಿದ 33 ಜನರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಗುಣಮುಖರಾದವರಲ್ಲಿ ಚಿಂತಾಮಣಿ 4, ಚಿಕ್ಕಬಳ್ಳಾಪುರ 5, ಬಾಗೇಪಲ್ಲಿ 1, ಶಿಡ್ಲಘಟ್ಟ 6 ಹಾಗೂ ಗುಡಿಬಂಡೆ ವ್ಯಾಪ್ತಿಯಲ್ಲಿ ಒಬ್ಬ ಸೋಂಕಿತರು ಸೇರಿದ್ದಾರೆ. 579 ಸಕ್ರಿಯ ಸೋಂಕಿತರಿಗೆ ಜಿಲ್ಲೆಯ ಐಸೋಲೇಷನ್ ಸೇರಿದಂತೆ ತಾಲೂಕಿನ ಕೋವಿಡ್ ಕೇರ್ ಸೆಂಟರ್ ಹಾಗೂ ಹೋಂ ಐಸೋಲೇಷನ್ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.