ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಿನ್ನೆ 75 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 131 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕ್ಕಬಳ್ಳಾಪುರ-25, ಬಾಗೇಪಲ್ಲಿ-9, ಚಿಂತಾಮಣಿ-22, ಗೌರಿಬಿದನೂರು-16, ಗುಡಿಬಂಡೆ-3 ಮಂದಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,145ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ-24, ಬಾಗೇಪಲ್ಲಿ-17, ಚಿಂತಾಮಣಿ-31, ಗೌರಿಬಿದನೂರು-14, ಗುಡಿಬಂಡೆ-11, ಶಿಡ್ಲಘಟ್ಟ-34 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 10,476ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಚಿಂತಾಮಣಿ ಮೂಲದ 58 ವರ್ಷದ ಪುರುಷ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ.