ಚಿಕ್ಕಬಳ್ಳಾಪುರ : ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನೇದಿನೆ ಏರಿಕೆ ಕಾಣುತ್ತಿದೆ. ಇಂದು 83 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 53 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ 40, ಚಿಂತಾಮಣಿಯಲ್ಲಿ 11, ಬಾಗೇಪಲ್ಲಿಯಲ್ಲಿ 10, ಶಿಡ್ಲಘಟ್ಟದಲ್ಲಿ 5, ಗೌರಿಬಿದನೂರಿನಲ್ಲಿ 13 ಮತ್ತು ಗುಡಿಬಂಡೆಯಲ್ಲಿ 4 ಮಂದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 993ಕ್ಕೆ ಏರಿಕೆಯಾಗಿದೆ. ಇನ್ನೂ ಶಿಡ್ಲಘಟ್ಟ ಮತ್ತು ಗುಡಿಬಂಡೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಮೃತರ ಸಂಖ್ಯೆ 22ಕ್ಕೆ ತಲುಪಿದೆ.
ಈವರೆಗೆ 993 ಸೋಂಕಿತರಲ್ಲಿ 443 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 528 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.