ಚಿಕ್ಕಬಳ್ಳಾಪುರ: ತಾಲೂಕಿನ ಹೀರೆನಾಗವೇಲಿ ಸಮೀಪದ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ವಸ್ತುಗಳನ್ನು ಸಾಗಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗೌರಿಬಿದನೂರು ಮೂಲದ ಗಂಗೋಜಿ ರಾವ್ ಬಂಧಿತ ಆರೋಪಿ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಸದ್ಯ, ಸ್ಫೋಟಕ ವಸ್ತುಗಳನ್ನು ಸಾಗಿಸಿದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.
ಓದಿ: ಸ್ಫೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ: ಸಚಿವ ಮುರುಗೇಶ್ ನಿರಾಣಿ
ಬಾಗೇಪಲ್ಲಿ ಮೂಲದ ನಾಗರಾಜ್ ರೆಡ್ಡಿ, ಆಂಧ್ರಪ್ರದೇಶದ ರಾಘವೇಂದ್ರ ರೆಡ್ಡಿ ಹಾಗೂ ಶಿವರೆಡ್ಡಿ ಬ್ರಹ್ಮವರ್ಷಿಣಿ ಕ್ರಶರ್ ಮಾಲೀಕರೆಂದು ತಿಳಿದುಬಂದಿದೆ.