ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೆಹಳ್ಳಿಯ ಶ್ರೀನಿವಾಸ ಎಂಬುವವರ 10 ವರ್ಷದ ಮಗಳು ಡೆಂಗ್ಯೂ ಜ್ವರ ಶಂಕೆಗೆ ಬಲಿಯಾಗಿದ್ದಾಳೆ ಎನ್ನಲಾಗಿದೆ.
ಎರಡು ದಿನಗಳಿಂದ ಜ್ವರ ಬಳಲುತ್ತಿದ್ದ ಬಾಲಕಿಯನ್ನು ತಾಲೂಕಿನ ಗುಡಿಬಂಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಬಾಲಕಿ ಶಾಲೆಗೆ ಹೋಗಿ ಮನೆಗೆ ವಾಪಾಸಾಗಿದ್ದಾಳೆ. ಜ್ವರ ಹೆಚ್ಚಾಗಿದ್ದರಿಂದ ಬೆಂಗಳೂರಿನ ಪೀಪಲ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾಳೆ.
ಗುಡಿಬಂಡೆ ತಾಲೂಕಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಗಳಲ್ಲಿ ಸ್ವಚ್ಛತೆ ಮಾಯವಾಗಿದೆ. ಇದರಿಂದಲೇ ಸಾಂಕ್ರಾಮಿಕ ಕಾಯಿಲೆ, ಡೆಂಗ್ಯೂ ಮತ್ತು ಚಿಕೂನ್ ಗುನ್ಯಾ ನಂತಹ ಜ್ವರ ಉಲ್ಬಣವಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.