ಚಿಕ್ಕಬಳ್ಳಾಪುರ: ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ನಂದಿ ಬೆಟ್ಟದಲ್ಲಿ ನಡೆದಿದೆ.
ಜಿಲ್ಲೆಯ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆದಿದೆ. ಜಿಲ್ಲೆಯ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಅಪರಿಚಿತ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಾಹನ ಸವಾರರು ವಾಹನ ಸಮೇತ ಪರಾರಿಯಾಗಿದ್ದಾರೆ.
ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಈ ಮಾರ್ಗದಲ್ಲಿ ವಾಹನಗಳು ಸಂಚಾರ ನಡೆಸುವುದರಿಂದ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂದು ಪತ್ತೆ ಹಚ್ಚಲು ಹಲವು ದಿನಗಳೇ ಬೇಕಾಗಿದೆ. ಘಟನೆ ನಂದಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.