ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗೇಪಲ್ಲಿಯಲ್ಲಿ ನಡೆದಿದೆ.
ವಡಿ ಗಿರಿಯಪ್ಪಹಳ್ಳಿ ಗ್ರಾಮದ ವೆಂಕಟರವಣಪ್ಪ (55,) ಮೃತ ದುರ್ದೈವಿ.
ಘಟನೆಯಲ್ಲಿ ಹಿಂಬದಿಯ ಬೈಕ್ ಸವಾರನಿಗೂ ತೀವ್ರ ಪೆಟ್ಟಾಗಿದ್ದು ಗಾಯಾಳುವನ್ನು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲಿಸಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.