ಚಿಕ್ಕಬಳ್ಳಾಪುರ: ಡಿಇಡಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ನರಸಪ್ಪ ಕಟ್ಟಡದಲ್ಲಿ ನಡೆದಿದೆ.
ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದ ಸುನಿಯಾ(23) ನೇಣಿಗೆ ಶರಣಾದ ವಿದ್ಯಾರ್ಥಿನಿ. ಈಕೆ ಎರಡು ತಿಂಗಳ ಹಿಂದೆ ನರಸಪ್ಪ ಎಂಬುವವರಲ್ಲಿ ಮನೆ ಬಾಡಿಗೆ ಪಡೆದು ಡಿಇಡಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಸಂಬಂಧಿಕರೊಬ್ಬರು ಆಕೆಯನ್ನು ಮಾತನಾಡಿಸಲೆಂದು ರೂಮ್ಗೆ ಹೋಗಾದ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ ಎಂಬ ಮಾಹಿತಿ ದೊರೆತಿದೆ.
ಘಟನೆ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಸಿಬ್ಬಂದಿ ಪರಿಶೀಲನೆ ನಡೆಸಿದ್ರು. ಬಳಿಕ ಯುವತಿಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಜೀವನದಲ್ಲಿ ಜಿಗುಪ್ಸೆ ಕಾರಣವೆನ್ನಲಾಗುತ್ತಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.