ಚಿಕ್ಕಬಳ್ಳಾಪುರ : ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರಿ ಅವ್ಯವಹಾರ ಆರೋಪ ಹಿನ್ನೆಲೆ ಇಂದು (ಶುಕ್ರವಾರ) ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿಂತಾಮಣಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕೋಟಿಗಟ್ಟಲೇ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಮೂಲಸೌಲಭ್ಯಗಳ ಯೋಜನೆಯಲ್ಲಿ ಭಾರಿ ಅವ್ಯಹಾರ ನಡೆದಿದೆ.
62(b) ಪ್ರಕಾರ ಮೂಲಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎನ್ನಲಾಗ್ತಿದೆ. ಎಸಿಬಿ ಡಿವೈಎಸ್ಪಿ ಪ್ರವೀಣ್ ನೇತೃತ್ವದ 7 ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಕಚೆೇರಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.