ಚಿಕ್ಕಬಳ್ಳಾಪುರ: 1,25 000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಣ್ಣ ನೀರಾವರಿ ಇಲಾಖೆ ಎಇಇ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.
ಎಇಇ ಮಲ್ಲಿಕಾರ್ಜುನಯ್ಯ ಎಸಿಬಿ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಎಲೆಕ್ಟ್ರಿಕ್ ಕಾಂಟಾಕ್ಟರ್ ಶ್ರೀನಿವಾಸ್ ನೀಡಿದ ದೂರಿನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 50 ಸಾವಿರ ಲಂಚ ಪಡೆಯುವ ವೇಳೆ ಭ್ರಷ್ಟ ಅಧಿಕಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
15 ಲಕ್ಷ ಕಾಮಗಾರಿಯ ಕಾಂಟ್ರಾಕ್ಟರ್‌ಗೆ ಬಿಲ್ ಮಾಡಲು 1 ಲಕ್ಷದ 25 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು ಲಂಚ ಸ್ವೀಕರಿಸುವ ವೇಳೆ ಚಿಕ್ಕಬಳ್ಳಾಪುರ ಎಸಿಬಿ ಅಧಿಕಾರಿಗಳು ಎಇಇಯನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.