ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ನಡೆಸಿದ ದಾಳಿಗೆ ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಬಾಗೇಪಲ್ಲಿ ತಾಲೂಕಿನ ತಿಮ್ಮಂಪಲ್ಲಿ ಗ್ರಾಮದ ಲೆಕ್ಕಾಧಿಕಾರಿ ಶಿವಕುಮಾರ್ ಸಿಕ್ಕಿ ಬಿದ್ದಿದ್ದಾರೆ.
ಜಮೀನು ಖಾತೆ ಮಾಡಲು ವ್ಯಕ್ತಿಯೊಬ್ಬರಿಂದ 35 ಸಾವಿರ ರೂ. ಹಣಕ್ಕೆ ಶಿವಕುಮಾರ್ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಈ ಸಂಬಂಧ 10 ಸಾವಿರ ರೂ. ಮುಂಗಡ ಪಡೆದುಕೊಂಡಿದ್ದರು. ಪುನಃ ಇಂದು ಮಧ್ಯಾಹ್ನ 1.30 ಗಂಟೆಗೆ ಉಳಿದ 25 ಸಾವಿರ ರೂಗಳನ್ನು ಬಾಗೇಪಲ್ಲಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಪಡೆಯುತ್ತಿರುವಾಗ, ಖಚಿತ ಮಾಹಿತಿ ಆಧಾರಿಸಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ: ಜೂಜಾಡುತ್ತಿದ್ದ ಎಎಸ್ಐ, ಕಾನ್ಸ್‌ಟೇಬಲ್, ತಹಶೀಲ್ದಾರ್ ಚಾಲಕ ಅರೆಸ್ಟ್
ಎಸಿಬಿ ಡಿವೈಎಸ್ಪಿ ಪ್ರವೀಣ್ ಎಂ. ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಲಂಚ ಪಡೆದಿದ್ದ ಹಣ ಹಾಗೂ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಕುಮಾರ್ ಅವರನ್ನು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.