ಚಿಕ್ಕಬಳ್ಳಾಪುರ : ಕೆಎಸ್ಆರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ದುಡ್ಡು ಕುರುಗೋಡು ಬಳಿ ನಡೆದಿದೆ. ಕಲ್ಲೂಡಿ ಗ್ರಾಮದ ಶಿವಕುಮಾರ್ (26) ಮೃತ ಯುವಕ ಎಂದು ತಿಳಿದು ಬಂದಿದೆ.
![Accident between KSRTC bus and bike](https://etvbharatimages.akamaized.net/etvbharat/prod-images/kn-ckb-05-05-accident-av-7202617_05032020194057_0503f_1583417457_1087.jpg)
ಹಿಂದೂಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಕಲ್ಲುಡಿಯಿಂದ ಹೋಗುತ್ತಿದ್ದ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![Accident between KSRTC bus and bike](https://etvbharatimages.akamaized.net/etvbharat/prod-images/kn-ckb-05-05-accident-av-7202617_05032020194057_0503f_1583417457_903.jpg)