ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಯರ್ರಲೇಖನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ತಾಯಿ-ಮಗ ಸಾವನ್ನಪ್ಪಿದ್ದಾರೆ.
ರಸ್ತೆಯ ಬದಿ ನಿಂತಿದ್ದ ಕ್ಯಾಂಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತಾಯಿ ಅಂಜಿನಮ್ಮ (85) ಮತ್ತು ಮಗ ವೆಂಕಟರವಣಪ್ಪ (60) ಮೃತಪಟ್ಟಿದ್ದಾರೆ.

ಬಾಗೆಪಲ್ಲಿ ಪಟ್ಟಣದ ತಾಯಿ ಮತ್ತು ಮಗ ಬೆಂಗಳೂರಿನಿಂದ ಊರಿಗೆ ವಾಪಸ್ ಬರುತ್ತಿದ್ದ ವೇಳೆ ಯರ್ರಲೇಖನಹಳ್ಳಿ ಕ್ರಾಸ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ, ದೂರು ದಾಖಲಿಸಿಕೊಂಡಿದ್ದಾರೆ.