ಚಿಕ್ಕಬಳ್ಳಾಪುರ: ಟಾಟಾ ಏಸ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಲಕೂರು ಗೇಟ್ ಬಳಿ ನಡೆದಿದೆ.
ಮೃತ ಯುವಕನ ಹೆಸರು, ವಿಳಾಸ ತಿಳಿದುಬಂದಿಲ್ಲ. ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಗಾಯಗೊಂಡ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿಗೆ ಹೋಗುತ್ತಿದ್ದ ಟಾಟಾ ಏಸ್ ಅತಿಯಾದ ವೇಗದಿಂದ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಸುಮಾರು 10 ಅಡಿಯಷ್ಟು ಮೇಲಕ್ಕೆ ದ್ವಿಚಕ್ರ ವಾಹನ ಹಾರಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ತಾಪ್ತಿಯಲ್ಲಿ ಘಟನೆ ಜರುಗಿದೆ.