ಚಿಕ್ಕಬಳ್ಳಾಪುರ: ಬೈಕ್ ಕದ್ದು ಪರಾರಿಯಾಗುತ್ತಿದ್ದ ವೇಳೆ ಕಳ್ಳನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.
ನಗರದ ಎಪಿಎಂಸಿ ಬಳಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಕಂಡ ವ್ಯಕ್ತಿಯನ್ನು ತಡೆದು ಪ್ರಶ್ನಿಸಿದಾಗ ಗಾಬರಿಗೊಂಡ ವ್ಯಕ್ತಿ ಅಲ್ಲಿಂದ ಓಡಲು ಯತ್ನಿಸಿದ್ದಾನೆ. ಈ ವೇಳೆ, ಸಿಬ್ಬಂದಿ ಆತನನ್ನು ಹಿಡಿದು ಠಾಣೆಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಿದಾಗ ಆತ ಬೈಕ್ ಕಳ್ಳ ಎಂದು ತಿಳಿದು ಬಂದಿದೆ.
ಇನ್ನು ಆರೋಪಿ ಮೂಲತಃ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು, ಆತನಿಂದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ಗಳಾದ ರಿಜ್ವಾನ್, ಶ್ರೀನಿವಾಸರೆಡ್ಡಿ, ಅಶ್ವತ್ಥ್ ಹಾಗೂ ಪಿಎಸ್ಐ ಮೋಹನ್ ಕುಮಾರ್ ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.