ಚಿಕ್ಕಬಳ್ಳಾಪುರ : ಬಹುಭಾಷಾ ನಟಿ ಹರಿಪ್ರಿಯ ತನ್ನ ಹುಟ್ಟೂರು ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಸುಧಾಕರ್ ಪರ ಮನೆಮನೆಗೂ ತೆರಳಿ ಮತಯಾಚನೆ ನಡೆಸಿದ್ದಾರೆ.
ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಬಾರಿ ಸುಧಾಕರ್ ಅವರಿಗೆ ಮತಯಾಚನೆ ನಡೆಸುತ್ತಿದ್ದು, ಸಂತಸ ತಂದಿದೆ. ಈ ಕ್ಷೇತ್ರದ ಅಭ್ಯರ್ಥಿ ಸುಧಾಕರ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದು, ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಜನತೆಗೆ ಮನವಿ ಮಾಡಿಕೊಂಡರು.
ಮೆಡಿಕಲ್ ಕಾಲೇಜು, ನಿವೇಶನಗಳ ಹಂಚಿಕೆ ಸೇರಿದಂತೆ ಸುಧಾಕರ್ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಜನತೆ ಸಾಕಷ್ಟು ಬೆಂಬಲ ನೀಡುತ್ತಿದ್ದು, ಈ ಬಾರಿ ಚುನಾವಣೆಯಲ್ಲಿ ಗೆಲ್ಲಲ್ಲಿದ್ದಾರೆಂದು ತಿಳಿಸಿದ್ರು.
ಇಲ್ಲಿನ ಜನತೆ ಇಲ್ಲೇ ಡ್ರಾ ಇಲ್ಲೇ ಬಹುಮಾನವನ್ನು ನೀಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗೆ ನಮ್ಮ ಮತವೆಂದು ಹೇಳುತ್ತಿದ್ದಾರೆ. ಚಿಕ್ಕಂದಿನಿಂದಲೂ ಇಲ್ಲೇ ಬೆಳೆದ ಕಾರಣ ಸಾಕಷ್ಟು ಪ್ರೀತಿಯನ್ನು ತೋರಿಸುತ್ತಿದ್ದಾರೆ ಎಂದರು.
ರಾಜಕೀಯ ಸೇರುವ ಬಗ್ಗೆ:
ಚಿತ್ರರಂಗ ಪ್ರವೇಶದ ಬಗ್ಗೆಯೂ ಯಾವುದೇ ಪ್ಲಾನ್ ಇರಲಿಲ್ಲ. ಸದ್ಯ ಈಗಲೇ ರಾಜಕೀಯ ಸೇರುವ ಬಗ್ಗೆ ಯಾವುದೇ ಆಲೋಚನೆ ಮಾಡಿಲ್ಲ. ಮುಂಬರುವ ದಿನಗಳಲ್ಲಿ ನೋಡಬೇಕಾಗಿದೆ ಎಂದು ತಿಳಿಸಿದರು.