ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ನಿನ್ನೆ(ಶುಕ್ರವಾರ) ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರು ಆಗಮಿಸುತ್ತಿರುವ ಹಿನ್ನೆಲೆ ಮುದ್ದೇನಹಳ್ಳಿ ಗ್ರಾಮದಲ್ಲಿ ಹೈ ಅಲರ್ಟ್ ಮಾಡಲಾಗಿತ್ತು.
ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿ ಪ್ರವೇಶ ನೀಡಲಾಯಿತು. ಡಾಗ್ ಸ್ಕ್ವಾಡ್ ಸೇರಿದಂತೆ ಬಾಂಬ್ ನಿಷ್ಕ್ರಿಯ ದಳ ಸ್ಥಳದಲ್ಲಿ ಪರಿಶೀಲನೆ ನಡೆಸಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು. ಅಮಿತ್ ಶಾ ಆಗಮನ ಹಿನ್ನೆಲೆ ಚಿಕ್ಕಬಳ್ಳಾಪುರ ನಗರವು ಕೇಸರಿಮಯವಾಗಿತ್ತು.
-
ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರೊಂದಿಗೆ ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು. pic.twitter.com/AV75VHq22h
— Basavaraj S Bommai (@BSBommai) April 1, 2022 " class="align-text-top noRightClick twitterSection" data="
">ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರೊಂದಿಗೆ ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು. pic.twitter.com/AV75VHq22h
— Basavaraj S Bommai (@BSBommai) April 1, 2022ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಅಮಿತ್ ಶಾ ಅವರೊಂದಿಗೆ ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು. pic.twitter.com/AV75VHq22h
— Basavaraj S Bommai (@BSBommai) April 1, 2022
ಈ ಸಂರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆಮಿಥುನ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ನವೋದ್ಯಮ ವಲಯದಲ್ಲಿ ಬರ್ಲಿನ್ ಪ್ರಾಂತ್ಯದ ಜತೆ ರಾಜ್ಯದ ಒಡಂಬಡಿಕೆ: ಸಚಿವ ಅಶ್ವತ್ಥ ನಾರಾಯಣ