ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆಯಾಗಿದೆ.
ಜಿಲ್ಲೆಯ 18 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಆಂಧ್ರದ ಹಿಂದೂಪುರ ಹಾಗೂ ಅನಂತಪುರದವರೆಗೆ ಬಸ್ನಲ್ಲಿ ಪ್ರಯಾಣ ಮಾಡಿರುವ ಹಿನ್ನೆಲೆ ಇದ್ದು, ಯುವಕನಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ 18 ಜನ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ.