ಚಿಕ್ಕಬಳ್ಳಾಪುರ: ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಪಾಳ್ಯ ಗೇಟ್ ಬಳಿ ನಡೆದಿದೆ.
ಹಿರೇಪಾಳ್ಯ ಗೇಟ್ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.