ETV Bharat / state

150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ - ಈಟಿವಿ ಭಾರತ ಕನ್ನಡ

ರಾಜ್ಯದಲ್ಲಿ 150ಕ್ಕೂ ಹೆಚ್ಚು ಸೀಟ್​ಗಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ - ಮೋದಿ, ಬಿಎಸ್​ವೈ, ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ - ಅರುಣ್‌ ಸಿಂಗ್‌ ವಿಶ್ವಾಸ

arun-singh
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌
author img

By

Published : Jan 21, 2023, 10:16 PM IST

ಚಿಕ್ಕಬಳ್ಳಾಪುರ: ರಾಜ್ಯದ ಜನತೆಗೆ ಡಬಲ್‌ ಎಂಜಿನ್‌ ಸರ್ಕಾರದ ಅಗತ್ಯತೆ ಮತ್ತು ಅಭಿವೃದ್ಧಿ ಕೆಲಸಗಳ ವೇಗದ ಬಗ್ಗೆ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿ ನಾಯತಕತ್ವ, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ 150ಕ್ಕೂ ಅಧಿಕ ಸೀಟುಗಳೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ವಿಜಯ ಸಂಕಲ್ಪ ಅಭಿಯಾನದ ವೇಳೆ ಮಾತನಾಡಿದ ಅವರು, ಅಧಿಕಾರಕಾರದಲ್ಲಿದ್ದಾಗ ಕಾಂಗ್ರೆಸ್‌ ಭ್ರಷ್ಟಾಚಾರ, ಸಮಯ ವ್ಯರ್ಥ ಮಾಡಿದ್ದೇ ಸಾಧನೆ. ಕೇವಲ ಚಿಕ್ಕಬಳ್ಳಾಪುರ ಒಂದು ಜಿಲ್ಲೆಗೆ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಮಾತನಾಡಲಿ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಈ ಒಂದು ಜಿಲ್ಲೆಯಲ್ಲೇ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. 3124 ಜನಕ್ಕೆ ಪಿಎಂ ಆವಾಸ್‌ ಯೋಜನೆ ಅಡಿ ಮನೆಗಳು ಸಿಕ್ಕಿವೆ. ಪಿಎಂ ಕಿಸಾನ್‌ ಯೋಜನೆಯಡಿ 1 ಲಕ್ಷ 19 ಸಾವಿರಕ್ಕೂ ಅಧಿಕ ಜನರ ಅಕೌಂಟ್‌ಗೆ ಪ್ರತಿ ವರ್ಷ 10 ಸಾವಿರ ರೂ. ನೇರ ಪಾವತಿಯಾಗುತ್ತಿದೆ. ಪಿಎಂ ಮಾತೃತ್ವ ಬಂಧನ ಯೋಜನೆಯ ಲಾಭ 72,000 ಜನರಿಗೆ ಸಿಗುತ್ತಿದೆ. ಈ ಜಿಲ್ಲೆಯ 52,160 ಹಿರಿಯರಿಗೆ ಮಾಶಾಸನ ಸಿಗುತ್ತಿದೆ ಎಂದರು.

54,866 ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ: ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಮತ್ತು ಯುಪಿಎ ಅಧಿಕಾರದಲ್ಲಿದ್ದಾಗ ಜನರಿಗೆ ಕುಡಿಯಲು ನೀರು ಕೂಡ ಕೊಡುತ್ತಿರಲಿಲ್ಲ. ಆದರೆ ಜಲಜೀವನ್‌ ಮಿಷನ್‌ ಯೋಜನೆ ಮೂಲಕ ಚಿಕ್ಕಬಳ್ಳಾಪುರದಲ್ಲಿ 54,866 ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಹಿಂದೆ ಆಡಳಿತ ಮಾಡಿದ ಸರ್ಕಾರಗಳು ಈ ಜಿಲ್ಲೆಗೆ ಮೆಡಿಕಲ್‌ ಕಾಲೇಜು ಕೊಟ್ಟಿರಲಿಲ್ಲ. ಆದರೆ, ಶಾಸಕ ಸುಧಾಕರ್‌ ಅವರು ಸತತ ಪ್ರಯತ್ನ ಮಾಡಿ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಮೂಲಕ ಇಲ್ಲಿಗೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿಸಿದ್ದರು. ಅದರ ಕಟ್ಟಡ ಕೂಡ ಸಿದ್ಧವಾಗಿದೆ. ಕೆಲವೇ ದಿನಗಳಲ್ಲಿ ಇದರ ಉದ್ಘಾಟನೆಯೂ ಆಗಲಿದೆ ಎಂದು ತಿಳಿಸಿದರು.

ಮುಂದುವರೆದು ಉಜ್ವಲಾ ಯೋಜನೆಯಡಿ ಗ್ಯಾಸ್‌ ಕನೆಕ್ಷನ್‌ ನೀಡಲಾಗಿದೆ. ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸುವ ಯೋಜನೆಯಡಿ ಈ ಒಂದು ಜಿಲ್ಲೆಯಲ್ಲಿ 6,314ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್‌ ಕಲ್ಪಿಸಲಾಗಿದೆ. ಕೋವಿಡ್‌ ಸಮಯದಲ್ಲಿ ಉಚಿತ ಪಡಿತರ ವಿತರಿಸಿ ಬಡವರ ಸಂಕಷ್ಟಕ್ಕೆ ಸರ್ಕಾರ ಮಿಡಿದಿದೆ. ರಾಜ್ಯ ಸರ್ಕಾರ ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್‌ ನೀಡುತ್ತಿದೆ. ಸಿದ್ದರಾಮಯ್ಯ ಅವರೇ ಇದು ನಮ್ಮ ಸರ್ಕಾರದ ಸಾಧನೆ. ನಮ್ಮಲ್ಲಿ ನಾಯಕರು ಇದ್ದಾರೆ, ಹೇಳಿ ಕೊಳ್ಳಲು ನಾವು ಮಾಡಿದ ಕೆಲಸವಿದೆ, ಕಾರ್ಯಕರ್ತರ ಸೈನ್ಯವಿದೆ. ಈ ಮೂಲಕ 150 ಸೀಟುಗಳನ್ನು ಗೆಲ್ಲುವುದು ಖಚಿತ ಎಂದು ಹೆಳಿದರು.

ಕಾಂಗ್ರೆಸ್‌ ಬಳಿ ನಾಯಕರೂ ಇಲ್ಲ, ಕೆಲಸವೂ ಇಲ್ಲ. ಹೀಗಾಗಿ ರಾಜ್ಯದಲ್ಲಿ ಅವರು ಗೆಲ್ಲುವುದು ಇಲ್ಲ ಎಂದು ಹೇಳಿದರು. ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾದ ಎಲ್ಲಾ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಪ್ರತಿ ಮನೆಗಳಿಗೆ ಸ್ಟಿಕ್ಕರ್‌, ಗೋಡೆಗೆ ಪೈಂಟಿಂಗ್‌ ಮಾಡುವುದರ ಜೊತೆ ಸರ್ಕಾರದ ಯೋಜನೆಗಳನ್ನು ಅವರಿಗೆ ತಲುಪುವಂತೆ ಮಾಡಲು ಪ್ಲಾನ್‌ ಮಾಡಲಾಗಿದೆ.

ಕಾಂಗ್ರೆಸ್‌ ವಿರುದ್ಧ ಕಿಡಿ: ರಾಜ್ಯದಲ್ಲಿ ಚುನಾವಣೆಯ ಬಳಿಕ ಕಾಂಗ್ರೆಸ್‌ 130-140 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸು. ಯಾಕೆಂದರೆ ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಅನ್ನುವ ಬಗ್ಗೆ ಜನರಿಗೆ ಅರಿವಿದೆ. ಕಾಂಗ್ರೆಸ್‌ ಆಡಳಿತದ ಸಮಯದಲ್ಲಿ ಪಿಎಫ್‌ಐ ನೆಟ್ವರ್ಕ್‌ ಬೆಳೆಸಿದ್ದು ದೊಡ್ಡ ಸಾಧನೆ. 32 ಹಿಂದೂಗಳನ್ನು ಕೊಲೆ ಮಾಡಲಾಗಿತ್ತು. ಹಲವು ಭ್ರಷ್ಟಾಚಾರಗಳನ್ನು ಮಾಡಿದ್ದೇ ದೊಡ್ಡ ಸಾಧನೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನನ್ನು ಸೋಲಿಸಲು ತಾನೇ ಟೊಂಕ ಕಟ್ಟಿ ನಿಂತಿದೆ: ಬಿಜೆಪಿ ಟ್ವೀಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.