ಚಿಂತಾಮಣಿ (ಚಿಕ್ಕಬಳ್ಳಾಪುರ): ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿಯ ಕೆಲಸಗಳು ವಿಳಂಬವಾಗಿದೆ ಎನ್ನುವ ನೆಪವೊಡ್ಡಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕರ್ ಎಂಬುವವರು ಸಿ ದರ್ಜೆ ನೌಕರ ಎನ್.ಮೋಹನ್ ಮೇಲೆ ಹಲ್ಲೆ ನಡೆಸಿದ ಘಟನೆ ಈ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.
ಈಚೆಗೆ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅವಧಿ ಮುಗಿದ ಕಾರಣ ಸರ್ಕಾರಿ ಅಧಿಕಾರಿಯನ್ನು ನೇಮಿಸಲಾಗಿತ್ತು. ಇದರಿಂದ ಕೆಲಸಗಳು ವಿಳಂಬದ ಕುರಿತು ವಿ.ಶಂಕರ್ ಮತ್ತು ಎನ್.ಮೋಹನ್ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ತಿರುಗಿ ಸರ್ಕಾರಿ ನೌಕರರನ ಮೇಲೆ ಹಲ್ಲೆ ನಡೆಸಿದ್ದಾನೆ.
14 ನೇ ಹಣ ಕಾಸಿನ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಂಕರ್ನನ್ನು ಬಿಲ್ ನೀಡುವಂತೆ ನೌಕರರ ಮೋಹನ್ ಕೇಳಿದ್ದಾರೆ. ಇದರಿಂದ ಕುಪಿತಗೊಂಡ ಶಂಕರ್ ಕೈ ಮಿಲಾಯಿಸಿದ್ದಾನೆ.
ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.