ಚಿಂತಾಮಣಿ (ಚಿಕ್ಕಬಳ್ಳಾಪುರ): ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಪಿಡಿಓ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
ಶೆಟ್ಟಹಳ್ಳಿ ಗ್ರಾಪಂ ಪಿಡಿಓ ಬಾಗ್ಯಮ್ಮ ಹಲ್ಲೆಗೊಳಗಾದವರು. ಕಚೇರಿ ಕೆಲಸ ಮುಗಿಸಿ ಮಧ್ಯಾಹ್ನ 3 ಗಂಟೆ ನಂತರ ಪತಿಯ ಜೊತೆ ಬೈಕ್ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಅಪರಿಚಿತರು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಅಧಿಕಾರಿ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪಿಡಿಓ ಅವರನ್ನೇ ಗುರಿಯಾಗಿಸಿಕೊಂಡು ಹಲ್ಲೆ ಮಾಡಿದ್ದಾರೆ. ಪಿಡಿಓ ಮಾಂಗಲ್ಯ ಸರ ಕಸಿಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.