ಬಾಗೇಪಲ್ಲಿ: ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿ ಇದ್ದರೂ ತಾಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಸಾವಿರಾರು ರೂಪಾಯಿ ಮದ್ಯ ವಶಪಡಿಸಿಕೊಂಡರು.
ಬಾಗೇಪಲ್ಲಿ ತಾಲೂಕು ಗೂಳೂರು ಹೋಬಳಿ ವ್ಯಾಪ್ತಿಯ ಗೊರ್ತಪಲ್ಲಿ, ಜಿಲಾಜಿರ್ಲಾ ಹಾಗೂ ಬಾಗೇಪಲ್ಲಿ ಕಸಬಾ ಹೋಬಳಿ ಯಲ್ಲಂಪಲ್ಲಿ ಗ್ರಾಮಗಳಲ್ಲಿ ಈ ಅಕ್ರಮ ನಡೆಯುತ್ತಿತ್ತು. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.