ETV Bharat / state

ನಗರಸಭೆ ಸದಸ್ಯನ ಕೊಲೆಗೆ ಯತ್ನಿಸಿದ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು: ಎಸ್ಪಿ ನಾಗೇಶ್ - ಆರೋಪಿಗಳ ಪತ್ತೆಗೆ ಜಾಲ

ಚಿಕ್ಕಬಳ್ಳಾಪುರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಡಿ ಎಲ್ ನಾಗೇಶ್ ಮಾಹಿತಿ ನೀಡಿದ್ದಾರೆ.

SP D L Nagesh addressed the press conference.
ಎಸ್ಪಿ ಡಿ ಎಲ್ ನಾಗೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
author img

By ETV Bharat Karnataka Team

Published : Oct 14, 2023, 5:26 PM IST

ಚಿಕ್ಕಬಳ್ಳಾಪುರ: ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್​ ಮುಖಂಡ ಹಾಗೂ ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ವರಿಷ್ಠಾಧಿಕಾರಿ ಡಿ ಎಲ್ ನಾಗೇಶ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಗಜಾನನ ಸರ್ಕಲ್ ಬಳಿ ಅಪರಿಚಿತರ ಗುಂಪೊಂದು ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ಲಾಂಗ್ ಮಚ್ಚಿನಿಂದ ದಾಳಿ ನಡೆಸಿ ಗಂಭೀರ ಗಾಯಗೊಳಿಸಿ ಪರಾರಿಯಾಗಿದ್ದರು. ಸದ್ಯ ಅಗ್ರಹಾರ ಮುರಳಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಜೆಡಿಎಸ್ ಮುಖಂಡ ಮುರಳಿ ಅವರನ್ನು ಕೊಲೆಗೆ ಯತ್ನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವಿಟ್ ಮೂಲಕ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಈಗಾಗಲೇ ಪೊಲೀಸ್​ ಇಲಾಖೆಯೂ ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರಣೆ ಶುರು ಮಾಡಿದೆ ಎಂದು ಹೇಳಿದರು.

ಆರೋಪಿಗಳ ಸುಳಿವು ಸಿಕ್ಕಿದೆ: ಕೊಲೆ ಯತ್ನ ನಡೆಸಿದ ಆರೋಪಿಗಳ ಬಗ್ಗೆ ಸುಳಿವು ಇದೆ. ಏಕಾಎಕಿ ಮಾರಕಾಸ್ತ್ರಗಳಿಂದ ಮೂವರು ಅಪರಿಚಿತರು ದಾಳಿ ನಡೆಸಿದ ಪರಿಣಾಮ ಜೆಡಿಎಸ್ ಮಖಂಡ ಅಗ್ರಹಾರ ಮುರಳಿ ತಲೆಗೆ ಕೈಗಳಿಗೆ ಗಂಭೀರ ಗಾಯಗಳಾಗಿವೆ. ಈ ವೇಳೆ ಸ್ಥಳೀಯರು ಅಗ್ರಹಾರ ಮುರಳಿ ಅವರನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಆ ಸಂದರ್ಭದಲ್ಲಿ ಸ್ಥಳೀಯರು ಜೆಡಿಎಸ್ ಮುಖಂಡ ಮುರಳಿ ಅವರಿಗೆ ಚಿಕಿತ್ಸೆ ಕೊಡಿಸುವಲ್ಲಿ ಸ್ಥಳೀಯರು ತೋರಿದ ಶ್ರಮ ಮೆಚ್ಚುವಂತಹದ್ದು ಎಂದು ಮಾಹಿತಿ ನೀಡಿದರು.

ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು ಮಾಹಿತಿ ಕಲೆ ಹಾಕಲಾಗಿದೆ. ಇದುವರೆಗೆ ಯಾರು ಈ ಘಟನೆಗೆ ಸಂಬಂಧಿಸಿದಂತೆ ಯಾರು ಇಲ್ಲಿಯವರೆಗೆ ದೂರು ನೀಡಿಲ್ಲಾ. ಆದರೂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದೇವೆ ಎಂದು ಹೇಳಿದರು.

ಜೆಡಿಎಸ್ ಮುಖಂಡ ಹತ್ಯೆಗೆ ಯತ್ನ, ಕುಮಾರಸ್ವಾಮಿ ಆಕ್ರೋಶ.. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ದೌರ್ಜನ್ಯ ಮಿತಿ ಮೀರಿದೆ. ಗೃಹ ಇಲಾಖೆ, ಪೊಲೀಸ್ ವ್ಯವಸ್ಥೆ ಆಡಳಿತ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಚಿಂತಾಮಣಿ ವಿಧಾನಸಭೆ ಕ್ಷೇತ್ರದ @JanataDal_S ಮುಖಂಡರು, ನಗರಸಭೆ ಸದಸ್ಯರಾದ ಶ್ರೀ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.1/4@INCKarnataka ಸರಕಾರ…

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 14, 2023 " class="align-text-top noRightClick twitterSection" data=" ">

ಚಿಂತಾಮಣಿ ವಿಧಾನಸಭೆ ಕ್ಷೇತ್ರದ ಜೆಡಿಎಸ್​ ಮುಖಂಡರು, ನಗರಸಭೆ ಸದಸ್ಯ ಅಗ್ರಹಾರ ಮುರಳಿ ಅವರ ಮೇಲೆ ದುಷ್ಕರ್ಮಿಗಳು ಮಚ್ಚು ಲಾಂಗ್ ಗಳಿಂದ ಪೈಶಾಚಿಕ ದಾಳಿ ನಡೆಸಿರುವ ಘಟನೆ ಖಂಡನೀಯ. ಈ ಕೃತ್ಯ ಎಸಗಿದ ದುರುಳರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್​ದಲ್ಲಿ ಆಗ್ರಹಿಸಿದ್ದಾರೆ.

ಕೆಲ ದಿನಗಳ ಹಿಂದೆ ಹಾಸನದಲ್ಲಿ ಜೆಡಿಎಸ್​​ ಮುಖಂಡರಾದ ಕೃಷ್ಣೇಗೌಡರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಹೊಳೆನರಸೀಪುರದಲ್ಲಿ ನಮ್ಮ ಪಕ್ಷದ ಮುಖಂಡರಾದ ಅಶ್ವತ್ಥ್ ಅವರ ಮೇಲೆ ದಾಳಿ ನಡೆದಿತ್ತು. ಈಗ ಚಿಂತಾಮಣಿಯಲ್ಲಿ ಅಂಥಹದ್ದೇ ಘಟನೆ ನಡೆದಿರುವುದು ಪ್ರತಿಪಕ್ಷಗಳನ್ನು ಹೆದರಿಸಿ ಬೆದರಿಸುವ ದುಷ್ಟ ಹುನ್ನಾರವಲ್ಲದೆ ಮತ್ತೇನಲ್ಲ ಎಂದು ಕಿಡಿಕಾರಿದ್ದಾರೆ.

ಅದರಲ್ಲೂ ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗುತ್ತಿದೆ. ಇದು ಸರಿ ಅಲ್ಲ, ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಸದಾ ಶಾಂತಿ ನೆಲೆಸಿರಬೇಕು ಎನ್ನುವುದು ನಮ್ಮ ಪಕ್ಷದ ಆಶಯ. ಸರ್ಕಾರ ಮತ್ತು ಗೃಹ ಸಚಿವರು ಕೂಡಲೇ ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದರೆ ಪಕ್ಷದ ವತಿಯಿಂದ ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಹೆಚ್​ಡಿಕೆ ಎಚ್ಚರಿಸಿದ್ದಾರೆ.

ಇದನ್ನೂಓದಿ:ಹೆಚ್​ಡಿಕೆ ತಿಹಾರ್ ಜೈಲ್ ಬಗ್ಗೆ ಮಾತನಾಡುತ್ತಾರೆ, ಅವರು ಏನೇನು ಮಾತಾಡಿಕೊಂಡು ಬಂದಿದ್ದಾರೆ ಗೊತ್ತಿದೆ: ಡಿಸಿಎಂ ಡಿಕೆಶಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.