ETV Bharat / state

ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಹರಿಹರಪುರದ ಸ್ವಾಮೀಜಿ ಸ್ಪಷ್ಟನೆ - ಹರಿಹರಪುರದ ಸ್ವಾಮೀಜಿ ಸ್ಪಷ್ಟನೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಮಠದ ಸಚ್ಚಿದಾನಂದ ಸ್ವಾಮೀಜಿ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಕುರಿತು ಸ್ಪಷ್ಟನೆ ನೀಡಿದ್ದಾರೆ.

Ayodhya Ram Lalla statue  Prana Prathishtapane  Swamiji of Hariharpur clarified  ಹರಿಹರಪುರದ ಸ್ವಾಮೀಜಿ ಸ್ಪಷ್ಟನೆ  ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಹರಿಹರಪುರದ ಸ್ವಾಮೀಜಿ ಸ್ಪಷ್ಟನೆ
author img

By ETV Bharat Karnataka Team

Published : Jan 13, 2024, 9:07 PM IST

Updated : Jan 13, 2024, 10:59 PM IST

ಅಯೋಧ್ಯೆ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಹರಿಹರಪುರದ ಸ್ವಾಮೀಜಿ ಸ್ಪಷ್ಟನೆ

ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಕುರಿತು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಹರಿಹರಪುರ ಮಠದ ಸಚ್ಚಿದಾನಂದ ಸ್ವಾಮೀಜಿ ಸ್ಪಷ್ಟನೆ ಕೊಟ್ಟಿದ್ದಾರೆ.

''ರಾಮ ಮಂದಿರದ ಬಗ್ಗೆ ಅಸಮಾಧಾನದ ವದಂತಿ ಕೇಳಿ ಬರ್ತಿದೆ. ಶಂಕರ ಪರಂಪರೆ ಹಾಗೂ ಶ್ರೀರಾಮನಿಗೆ ಏನು ಸಂಬಂಧ ಅಂತ ಮೊದಲು ತಿಳಿದು ಕೊಳ್ಳಬೇಕು. ಶಂಕರ ಪರಂಪರೆಯ ಮೂಲ ಪುರುಷರು ಆದಿ ಶಂಕರರು. ಶಂಕರರು ಅದ್ವೈತ ಸಿದ್ದಾಂತದ ಮೂಲಕ ಪರಮಾತ್ಮನನ್ನು ತತ್ವ ಸ್ವರೂಪದಲ್ಲಿ ಆರಾಧಿಸುವುದನ್ನು ಜಗತ್ತಿಗೆ ತಿಳಿಸಿದ್ದಾರೆ. ಹರಿ ಹರ ಪರ ಬ್ರಹ್ಮನ ಅತ್ಯಂತ ಸಮಾನವಾದ ರೂಪಗಳು. ಹರಿಹರನನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸುವ ಪರಂಪರೆ ಶಂಕರ ಪರಂಪರೆಯಾಗಿದೆ'' ಎಂದು ಸ್ವಾಮೀಜಿ ತಿಳಿಸಿದರು.

''ಹರಿ ಅಂದ್ರೆ ಮಹಾವಿಷ್ಣು, ವಿಷ್ಣುವಿನ 7ನೇ ಅವತಾರವೇ ಶ್ರೀರಾಮ, ಶಂಕರರು ಶ್ರೀರಾಮನ ಪರಮ ಭಕ್ತರಾಗಿದ್ದರು. ಶಂಕರರು ರಾಮನ ಬಗ್ಗೆ ಸ್ತೋತ್ರಗಳನ್ನು ರಚಿಸಿ ಶ್ರೀರಾಮನಿಗೆ ಸಮರ್ಪಣೆ ಮಾಡಿದ್ದಾರೆ. ಶಂಕರರು ಸ್ಥಾಪಿಸಿದ ಪೀಠಗಳಲ್ಲಿ ಶ್ರೀ ರಾಮನನ್ನು ನಿರಂತರವಾಗಿ ಆರಾಧಿಸುವಂತೆ ಆದೇಶಿಸಿದ್ದಾರೆ. ಶಂಕರ ಪರಂಪರೆಯ ಎಲ್ಲ ಮಠಗಳು ಶ್ರೀರಾಮನನ್ನು ಆರಾಧಿಸಿ ಕೊಂಡು ಬರುತ್ತಿದ್ದಾರೆ. ಶ್ರೀರಾಮ ಮಂದಿರ ಅನ್ನೋದು ಎಲ್ಲಾ ಮಠಗಳಲ್ಲೂ ಇದೆ. ಶ್ರೀರಾಮ ಭಾರತೀಯ ಸಂಸ್ಕೃತಿಗೆ ಸೇರಿದ ದೇವರು. ನಮ್ಮ ದೇಶದ ಹೆಗ್ಗುರುತು ಭಗವಾನ್ ಶ್ರೀರಾಮ, ಈ ಪವಿತ್ರ ದೇಶದ ಅಸ್ಮಿತೆ'' ಎಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಮಠದ ಸಚ್ಚಿದಾನಂದ ಸ್ವಾಮೀಜಿ ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್: ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಅದಕ್ಕೂ ಮೊದಲು ಜನವರಿ 16 ರಿಂದ ಏಳು ದಿನಗಳ ಕಾಲ ಪೂಜಾ ವಿಧಿವಿಧಾನಗಳು ನಡೆಯಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೇರಿದಂತೆ ಐವರು ಗಣ್ಯರಿಗೆ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಇತ್ತೀಚೆಗೆ ಮಾಹಿತಿ ನೀಡಿತ್ತು.

ಕಾರ್ಯಕ್ರಮಕ್ಕೆ ಗಣ್ಯರಿಗೆ ಆಹ್ವಾನ: ರಾಮ ಮಂದಿರ ಉದ್ಘಾಟನೆಗೆ ವಿರಾಟ್‌ ಕೊಹ್ಲಿ, ಸಚಿನ್‌ ತೆಂಡೂಲ್ಕರ್‌ ಸೇರಿದಂತೆ ದೇಶದ 7,000ಕ್ಕೂ ಅಧಿಕ ಗಣ್ಯರಿಗೆ ಆಹ್ವಾನಿಸಲಾಗಿದೆ. ಇದರಲ್ಲಿ 4 ಸಾವಿರ ಸಾಧು ಸಂತರಿಗೆ ಆಹ್ವಾನ ನೀಡಲಾಗಿದೆ. ಇವರೊಂದಿಗೆ ಉದ್ಯಮಿ ರತನ್ ಟಾಟಾ, ಮುಕೇಶ್‌ ಅಂಬಾನಿ, ಗೌತಮ್‌ ಅದಾನಿ ಸೇರಿದಂತೆ ಹಲವು ಉದ್ಯಮಿಗಳು, ಕರಸೇವೆಯಲ್ಲಿ ಬಲಿದಾನ ಮಾಡಿದವರ ಕುಟುಂಬ ಮತ್ತು ರಾಮಾಯಣ ಧಾರಾವಾಹಿಯಲ್ಲಿ ಪಾತ್ರವಹಿಸಿದ ಅರುಣ್‌ ಗೋವಿಲ್‌ ಹಾಗೂ ದೀಪಿಕಾ ಚಿಕ್ಲಿಯಾ ಅವರಿಗೆ ಆಹ್ವಾನ ಕೊಡಲಾಗಿದೆ ಎಂದು ಟ್ರಸ್ಟ್​ ತಿಳಿಸಿತ್ತು.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Last Updated : Jan 13, 2024, 10:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.